Skip to main content

Posts

Featured

MAAM ಸಹಯೋಗದಲ್ಲಿ ಬೆಂಗಳೂರಿನಲ್ಲಿ "ಸೈಬರ್‌ ಜಾಗೃತಿ ಕಾರ್ಯಕ್ರಮ"

ಹ್ಯಾಕರ್‌ಗಳು ವೃತ್ತಿಪರರು, ಸಂಘಟಿತರು-ಸೈಬರ್ ಜಾಗೃತಿ ಕಾರ್ಯಕ್ರಮದಲ್ಲಿ ಕಳವಳ ಬೆಂಗಳೂರು: ಹ್ಯಾಕರ್‌ಗಳು ಇತ್ತೀಚೆಗೆ ವೃತ್ತಿಪರರು ಮತ್ತು ಸಂಘಟಿತರಾಗಿದ್ದಾರೆ ಎಂದು ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾದ ಹಿರಿಯ ನಿರ್ದೇಶಕ ಕೆ. ವೆಂಕಟೇಶ್ ಮೂರ್ತಿ ಹೇಳಿದರು. ಬೆಂಗಳೂರು ಆಕಾಶವಾಣಿ ವತಿಯಿಂದ, ಮೀಡಿಯಾ ಅಲೂಮ್ನಿ ಅಸೋಸಿಯೇಷನ್ ಆಫ್ ಮಂಗಳಗಂಗೋತ್ರಿ (ಮಾಮ್), ಶಾರದಾ ವಿಕಾಸ ಟ್ರಸ್ಟ್ ಸಹಯೋಗದಲ್ಲಿ ಬಸವನಪುರದ ರಾಕ್ವುಡ್ ಗ್ರೀನ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಗುರುವಾರ ನಡೆದ ಸೈಬರ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ‘ಹ್ಯಾಕರ್ ಅಥವಾ ಹ್ಯಾಕಿಂಗ್ ಅನ್ನುವುದನ್ನು ನಕಾರಾತ್ಮಕ ಅರ್ಥದಲ್ಲಿ ಬಳಸಬೇಕಾಗಿಲ್ಲ. ಆದರೆ ಅನಧಿಕೃತವಾಗಿ ಡಿಜಿಟಲ್ ಮಾಹಿತಿಯನ್ನು ಕದಿಯುವುದು, ದುರ್ಬಳಕೆ ಮಾಡುವ ಪ್ರಕರಣಗಳು ವಿಪರೀತವಾಗಿ ಹೆಚ್ಚಿರುವುದರಿಂದ ಹ್ಯಾಕಿಂಗ್‌ನ್ನು ನಕಾರಾತ್ಮಕವಾಗಿ ಅರ್ಥೈಸಲಾಗುತ್ತಿದೆ. ಹ್ಯಾಕರ್‌ಗಳಿಗೆ ತಾಳ್ಮೆ ಬೇಕು. ಅದಕ್ಕೆಂದೇ ಅಂತರ್ಜಾಲದ ಕಪ್ಪು ಜಗತ್ತಿನಲ್ಲಿ ‘ತಾಳ್ಮೆ’ ‘ಧ್ಯಾನ’ದ ಕೋರ್ಸ್‌ಗಳನ್ನೂ ಕಲಿಸಲಾಗುತ್ತಿದೆ. ಕೆಲವು ಡಿಜಿಟಲ್ ಅರ್ಥ ವ್ಯವಸ್ಥೆಗಳ (ಕ್ರಿಪ್ಟೋಕರೆನ್ಸಿ) ಮೇಲೆ ನಿಯಂತ್ರಣ ಸಾಧಿಸುವುದೇ ಕಷ್ಟವಾಗಿದೆ. ನಮ್ಮ ಮಾಹಿತಿಯನ್ನು ಕದ್ದು, ಪೊಲೀಸರಿಗೆ ತಾವೇ ದೂರು ನೀಡುವ ಖದೀಮರೂ (ರಾನ್ಸಮ್ ಗ್ಯಾಂಗ್) ಇದ್ದಾರೆ. ಹಾಗಾಗಿ ಈ ಎಲ್ಲ ವ್ಯವಸ್ಥೆಗಳಿಂದ ಪಾರಾಗಲು ನಮ್ಮ ಡಿಜಿಟಲ್ ಖಾಸಗಿತನವನ್ನ...

Latest Posts